September 4, 2018

ಗುರು ನಮನ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ


ಶ್ರೀ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ನಾಗಮಂಗಲ. ಮಂಡ್ಯ ಜಿಲ್ಲೆ-571432
ಹಿರಿಯ ವಿದ್ಯಾರ್ಥಿಗಳ ಸಂಘ (ರಿ.)
ಗುರು ನಮನ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

     ಶ್ರೀ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಗುರು ನಮನ ಹಾಗೂ ರಾಜ್ಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನ ದಿನಾಂಕ: 01-09-2018ರಂದು ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ವಹಿಸಿದರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಕೆ.ಲೋಕೇಶರವರು ಉಪಸ್ಥಿತರಿದ್ದರು.
    
     ಕಾರ್ಯಕ್ರಮವನ್ನ ಬೆಳಿಗ್ಗೆ 9-30 ಕ್ಕೆ ಪ್ರಥಮ ಬಿ. ವಿದ್ಯಾರ್ಥಿಯಾದ ಮನೋಜ್ ಅವರ ಪ್ರಾರ್ಥನೆಯ ಮೂಲಕ ಆರಂಭಿಸಲಾಯಿತು ಕಾರ್ಯಕ್ರಮದ ವೇದಿಕೆಯ ಮೇಲೆ ಉಪಸ್ಥಿತರಿದ್ದಂತಹ ಎಲ್ಲಾ ಗಣ್ಯಾತಿ ಗಣ್ಯರನ್ನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷರು ಹಾಗೂ ವಕೀಲರಾದ ಶ್ರೀಯುತ ಕೆಂಪೇಗೌಡರು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಕಾಲೇಜಿನ ಕ್ರೀಯಾಶೀಲಾ ಪ್ರಾಂಶುಪಾಲರಾದ ಶ್ರೀಯುತ ಡಾ|| ಬಿ.ಕೆ.ಲೋಕೇಶರವರು ಕಾರ್ಯಕ್ರಮದ ಪ್ರಾಸ್ತವಿಕ ನುಡಿಗಳನ್ನು ನುಡಿದುರು. ಕಾರ್ಯಕ್ರಮದ ಮುಖ್ಯ ಘಟ್ಟವಾದಂತಹ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಸ್ತುತ ಕರ್ನಾಟಕ ಸರ್ಕಾದ ಕಾರಾಗೃಹ ಇಲಾಖೆಯ ಡಿ..ಜಿ.ಪಿ. ಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಹೆಚ್.ಎಸ್.ರೇವಣ್ಣನವರು ಹಾಗೂ ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಕೆ.ಲೋಕೇಶರವರು ಹಾಗೂ ಕೆಂಪೇಗೌಡರು ಕಾರ್ಯಾಧ್ಯಕ್ಷರು ಹಾಗೂ ವಕೀಲರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
     ಕಾರ್ಯಕ್ರಮದಲ್ಲಿ ಕಾಲೇಜಿನ ನೂರಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದರು ಹಾಗೂ ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
     ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಿಂದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಗುರು ನಮನವನ್ನು ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಆತಿಥಿಯಾಗಿದ್ದ ಶ್ರೀಯುತ ಹೆಚ್.ಎಸ್.ರೇವಣ್ಣನವರು ಮುಖ್ಯ ಅತಿಥಿ ಭಾಷಣವನ್ನು ನೆರವೇರಿಸಿ ಕೊಟ್ಟರು.
     ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಿಂದ ಹಾಗೂ ಸದಸ್ಯರಿಂದ ಇಲ್ಲಿಯವರೆಗೆ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಲ್ಲಾ ಪ್ರಾಧ್ಯಾಪಕರುಗಳಿಗೆ ಮಹಾಸ್ವಾಮೀಜಿಯವರಿಂದ ಗೌರವ ಸಮರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿದಂತಹ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳ ಕಾಲೇಜು ಜೀವನ ಹಾಗೂ ಅವರ ಗುರಿ ಹಾಗೂ ಅವರ ಈಗಿನ ಜೀವನ ವಿಧಾನಗಳನ್ನು ಕಿರಿಯ ವಿದ್ಯಾರ್ಥಿಗಳು ತಿಳಿದುಕೊಂಡು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಆಶೀರ್ವಚನ ನೀಡಿದರು.
     ಉದ್ಘಾಟನಾ ಕಾರ್ಯಕ್ರಮ ಕೊನೆಯ ಹಂತ ವಂದನಾರ್ಪಣೆಯನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸಂಘದ ಪದಾಧಿಕಾರಿಯಾದ ಶ್ರೀಯುತ ಲಕ್ಷ್ಮಣ್ರವರು ಎಲ್ಲಾ ಗಣ್ಯಾತಿಗಣ್ಯರಿಗೂ ವಂದಿಸುವ ಮೂಲಕ ನೇರವೇರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ಸಮಾಜಶಾಸ್ತ್ರದ ಪ್ರಾಧ್ಯಾಪಕರು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಯಾದ ಶ್ರೀಯುತ ದೇವಾನಂದ್ ನೆರವೇರಿಸಿದರು.
     ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮುಗಿದ ನಂತರ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಾದ ಜನಪದಗೀತೆ/ ಭಾವಗೀತೆ ಮತ್ತು ಚರ್ಚಾಸ್ಪರ್ಧೆಯನ್ನು ನಡೆಸಲಾಯಿತು.
         
     ಸಮಾರೋಪ ಸಮಾರಂಭ:
     ಶ್ರೀ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಗುರು ನಮನ ಹಾಗೂ ರಾಜ್ಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭವನ್ನ ಮಧ್ಯಾಹ್ನ 2-00 ಗಂಟೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ  ಪರಮಪೂಜ್ಯ ಶ್ರೀ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿಯವರು, ಪ್ರಧಾನ ಕಾರ್ಯದರ್ಶಿಗಳು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಶ್ರೀ ಆದಿಚುಂಚನಗಿರಿ ಮಠ. ವಹಿಸಿದರು. ಹಾಗೂ ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಕೆ.ಲೋಕೇಶರವರು ಉಪಸ್ಥಿತರಿದ್ದರು.
     ಕಾರ್ಯಕ್ರಮವನ್ನ ಪೂಜಾ ದ್ವಿತೀಯ ಬಿ. ರವರಿಂದ ಪ್ರಾರ್ಥನೆಯ ಮೂಲಕ ಪ್ರಾರಂಭಿಸಲಾಯಿತು. ಸಮಾರೋಪ ಸಮಾರಂಭ ಕಾರ್ಯಕ್ರಮದ ವೇದಿಕೆಯಲ್ಲಿನ ಎಲ್ಲಾ ಗಣ್ಯಾತೀಗಣ್ಯರನ್ನ ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಕೆ.ಲೋಕೇಶರವರು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಯುತ ಎಲ್.ಪ್ರಕಾಶ್, ಹಿರಿಯ ಪತ್ರಕರ್ತರು, ಬೆಂಗಳೂರು. ಮುಖ್ಯ ಅತಿಥಿ ಭಾಷಣವನ್ನ ನೇರವೇರಿಸಿದರು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ಸ್ವರ್ಧಾರ್ಥಿಗಳಿಗೆ ಬಹುಮಾನವನ್ನ ಪರಮಪೂಜ್ಯ ಶ್ರೀ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿಗಳು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಶ್ರೀ ಆದಿಚುಂಚನಗಿರಿ ಮಠ. ರವರು ಹಾಗೂ ವೇದಿಕೆ ಮೇಲಿನ ಎಲ್ಲಾ ಗಣ್ಯರು ವಿತರಿಸಿದರು ಹಾಗೂ ಕಾರ್ಯಕ್ರಮದ ಸಮಾರೋಪ ನುಡಿಯನ್ನ ಶ್ರೀಯುತ ರಾಮೇಗೌಡರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಸಮಾರೋಪ ನುಡಿಯನ್ನು ನೇರವೇರಿಸಿಕೊಟ್ಟರು. ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಇವರ ಆಶೀರ್ವಾದದೊಂದಿಗೆ ಕಾರ್ಯಕ್ರಮವನ್ನ ಯಶಸ್ವಿಗೊಳಿಸಲಾಯಿತು ಹಾಗೂ ಕಾರ್ಯಕ್ರಮದ ಅಂತಿಮ ಭಾಗ ವಂದನಾರ್ಪಣೆಯನ್ನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಶ್ರೀಯುತ ರವಿವರ್ಮ ಕೆ.ಜಿ ನೇರವೇರಿಸಿದರು.