November 4, 2021

ಪ್ರಬಂಧ ಸ್ಪರ್ಧೆ

 04-11-2021 ರಂದು ಶ್ರೀ ಆದಿಚುಂಚನಗಿರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ IQAC ಮತದಾರರ ಸಾಕ್ಷರತಾ ಸಂಘದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚಣೆಯ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಲು "ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ತಂತ್ರಗಳು" ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು . ಸುಮಾರು 30 ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹಾಗೂ ನಮ್ಮ ಕಾಲೇಜಿನ ಕ್ರಿಯಾಶೀಲ ಪ್ರಾಂಶಪಾಲರಾದ ಡಾ. ಬಿ ಕೆ ಲೋಕೇಶ ರವರ ಮಾರ್ಗರ್ಶನದಲ್ಲಿ ಮತ್ತು ELC ಸಂಚಾಲಕರಾದ ಹೆಚ್ ಎಸ್ ವಿನಯ್ ಕುಮಾರ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕೆ ಜಿ ರವಿವರ್ಮ ರವರು ಮತ್ತು ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾದ ಎಂ ಪಿ ಸುನಿಲ್ ಕುಮಾರ್ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.